ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾದ ಶರಣಾಗತ ನಕ್ಸಲ್ ಲಕ್ಷ್ಮೀ ತೊಂಬಟ್ಟು

ಕುಂದಾಪುರ : ಭಾನುವಾರ ಜಿಲ್ಲಾಡಳಿತದ ಮುಂದೆ ಶರಣಾಗಿದ್ದ ನಕ್ಸಲ್ ಮಹಿಳೆ ತೊಂಬಟ್ಟು ಲಕ್ಷ್ಮೀಗೆ ಕುಂದಾಪುರದ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಮಾಡಿದ್ದಾರೆ.

ಭಾನುವಾರ ಉಡುಪಿ ಜಿಲ್ಲಾಡಳಿತದ ಮುಂದೆ ಲಕ್ಷ್ಮೀ ಶರಣಾಗಿದ್ದರು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚೆಟ್ಟು ಗ್ರಾಮದ ತೊಂಬಟ್ಟು ನಿವಾಸಿಯಾಗಿರುವ ಲಕ್ಷ್ಮೀಯನ್ನು ಶರಣಾಗತಿ ನಂತರ ಕುಂದಾಪುರ ಡಿವೈಎಸ್ಪಿಗೆ ಹಸ್ತಾಂತರಿಸಲಾಗಿತ್ತು.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸಿದರು. ಆದರೆ ಲಕ್ಷ್ಮಿಯನ್ನು ಇನ್ನೂ ಕೂಡ ಪೊಲೀಸರು ಕಸ್ಟಡಿಗೆ ಕೇಳಿಲ್ಲ. ಒಂದೆರಡು ದಿನಗಳಲ್ಲಿ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯ ಅಮಾಸೆಬೈಲು ಠಾಣೆಯಲ್ಲಿ ಲಕ್ಷ್ಮೀ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿದ್ದು ವಿಚಾರಣೆಗೆ ಬಾಕಿ ಇವೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ