ಹೆಬ್ರಿಯಲ್ಲಿ ಎನ್‌ಕೌಂಟರ್‌ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ

ಹೆಬ್ರಿ : ಪಶ್ಚಿಮ ಘಟ್ಟ ತಪ್ಪಲು ಪ್ರದೇಶವಾದ ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ನಕ್ಸಲ್ ಎನ್​ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೇ ಹೊತ್ತಿಗೆ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಸದ್ದು ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.

ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.

Related posts

ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕೋಟದಲ್ಲಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು