ನಕ್ಸಲ್ ತೊಂಬಟ್ಟು ಲಕ್ಷ್ಮೀ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ

ಉಡುಪಿ : ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬಳಿಕ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾರೆ.

ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿಯ ಸದಸ್ಯರು ಇದ್ದರು. ಎಸ್ ಪಿ ಡಾ.ಕೆ ಅರುಣ್, ಹೆಚ್ಚುವರಿ ಎಸ್ಪಿ ಎಸ್ ಟಿ ಸಿದ್ದಲಿಂಗಪ್ಪ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆಯು ನಡೆಯಿತು

ನಕ್ಸಲ್ ಚಳವಳಿಯಲ್ಲಿ ಉಡುಪಿ ಜಿಲ್ಲೆಯ ವಿಕ್ರಂ ಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಇದರಲ್ಲಿ ಇತ್ತೀಚೆಗೆ ನಡೆದ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದರು. ಇದೀಗ ಲಕ್ಷ್ಮಿ ಪೊಲೀಸರಿಗೆ ಶರಣಾಗಿದ್ದಾರೆ. ಲಕ್ಷ್ಮಿ ಕಳೆದ ಹಲವು ವರ್ಷಗಳಿಂದ ಆಂಧ್ರಪ್ರದೇಶದಲ್ಲಿ ತನ್ನ ಪತಿ, ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ