ನೇಜಾರು ಕೊಲೆ ಪ್ರಕರಣ: ಆಗಸ್ಟ್ 24ಕ್ಕೆ ವಿಚಾರಣೆ ಮುಂದೂಡಿಕೆ

ಉಡುಪಿ : ಮಲ್ಪೆ ಠಾಣೆ ವ್ಯಾಪ್ತಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿ ಆದೇಶ ನೀಡಿದೆ.

ತನಗೆ ಹಾಗೂ ತನ್ನ ವಕೀಲರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಉಡುಪಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್‌ಗೆ ವರ್ಗಾಯಿಸುವಂತೆ ಕೊಲೆ ಆರೋಪಿ ಪ್ರವೀಣ್ ಚೌಗುಲೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ, ಈ ಅರ್ಜಿಯ ಮುಂದಿನ ವಿಚಾರಣೆ ನಡೆಸುವವರೆಗೆ ಉಡುಪಿ ಕೋರ್ಟ್‌ನಲ್ಲಿನ ವಿಚಾರಣೆಗೆ ತಡೆ ನೀಡಿ ಆದೇಶ ನೀಡಿದರು.

ಆ ಹಿನ್ನೆಲೆಯಲ್ಲಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿ ಆದೇಶ ನೀಡಿದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ