ಭಾರೀ ಮಳೆಗೆ ಉಪ್ಪಿನಂಗಡಿಯಲ್ಲಿ ಹೆದ್ದಾರಿಗೆ ನುಗ್ಗಿದ ನೇತ್ರಾವತಿ ನದಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಮಳೆ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿದ್ದು, ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ನದಿ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಘಟನೆ ನಡೆದಿದೆ.

ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯಲ್ಲಿ ನೀರು 29.6ಮೀಟರ್‌ನಲ್ಲಿದ್ದು, ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಪರಿಣಾಮ ನದಿನೀರು ಹಲವಾರು ಮನೆಗಳು ಸೇರಿದಂತೆ ಕೃಷಿ ತೋಟಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಅಲ್ಲದೆ ಪಂಜಳದಲ್ಲಿ ನದಿ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ರಸ್ತೆ ಸಂಚಾರ ವ್ಯವಸ್ಥೆಗೂ ಸಂಕಷ್ಟ ತಂದೊಡ್ಡಿದೆ. ಸದ್ಯ ಸ್ಥಳದಲ್ಲಿ ಪೊಲೀಸರು, ಅಧಿಕಾರಿಗಳು, ಸ್ಥಳೀಯರ ನೆರವಿನಿಂದ ಸುರಕ್ಷಿತವಾಗಿ ವಾಹನಗಳನ್ನು ಕಳುಹಿಸುತ್ತಿದ್ದಾರೆ. ಅಲ್ಲದೆ ರಸ್ತೆಯುದ್ದಕ್ಕೂ ವಾಹನಗಳು ನಿಂತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ