ನೂತನ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನ

ಉಡುಪಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಶಾರದಾ ಇಂಟರ್‌ನ್ಯಾಶನಲ್ ಸಭಾಂಗಣದಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ನೂತನ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಸಕಲೇಶಪುರ ಶಾಸಕ ಹಾಗೂ ಬಿಜೆಪಿ ಎಸ್. ಸಿ. ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ ಹಾಗೂ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ