ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅನಾರೋಗ್ಯದಿಂದ ಜೂನ್‌ 30ರಂದು ನಿಧನರಾದರು.

ಕೋಟದ ಕೋಟತಟ್ಟು ನಿವಾಸಿಯಾಗಿದ್ದ ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮೃತರಿಗೆ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ಉಡುಪಿ, ದಕ್ಷಿಣ ಕನ್ನಡದ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ