ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ನೂತನ ವೆಬ್‌ಸೈಟ್ ಅನಾವರಣ

ಪೆರ್ಡೂರು : ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಸಂಭ್ರಮದಿಂದ ನಡೆಯುತ್ತಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ನೂತನ ವೆಬ್‌ಸೈಟ್ ಅನ್ನು ಮಣಿಪಾಲದ ಮಾಹೆಯ ಸಹಕುಲಾಧಿಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್ ಅವರು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ದೇವಳದ ನೂತನ ಸ್ವಾಗತ ಸಮಿತಿಯ ಉದ್ಘಾಟನೆ, ಹಾಗೂ ರಥಬೀದಿಯಲ್ಲಿ ಅಳವಡಿಸಿದ ನೂತನ ದೀಪಗಳನ್ನು ಉದ್ಘಾಟಿಸಲಾಯಿತು.

ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಮಾ.19ರವರೆಗೆ ಕ್ಷೇತ್ರದ ತಂತ್ರಿಗಳಾದ ಕೆ.ಜಿ. ರಾಘವೇಂದ್ರ ತಂತ್ರಿ ಹಾಗೂ ಅರ್ಚಕ ಪಿ.ಕೃಷ್ಣ ಅಡಿಗ ಅವರ ಧಾರ್ಮಿಕ ನೇತೃತ್ವದಲ್ಲಿ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ