ಮಲ್ಪೆಯಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ; ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಮಾಹಿತಿ

ಉಡುಪಿ : ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಮಗುವಿನ ಮೃತದೇಹ ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ ಎಂದರು.

ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ ಶೌಚಾಲಯದಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಇದು ಮಸೀದಿಯವರ ಗಮನಕ್ಕೆ ಬಂದಾಗ ದೂರು ನೀಡಿದ್ದಾರೆ. ಈ ಮಗುವಿನ ಶವ ಎಲ್ಲಿಂದ ಬಂತು ಎಂದು ತನಿಖೆ ನಡೆಸಲಾಗಿದೆ. ಸ್ಥಳೀಯ ಯುವತಿ ಆಫ್ರಿನಾ ಅವರ ನವಜಾತ ಮಗುವಿನ ಶವ ಎಂದು ಗೊತ್ತಾಗಿದೆ. ಆಫ್ರಿನಾಳಿಂದ ಸ್ವ-ಇಚ್ಚಾ ಹೇಳಿಕೆ ಪಡೆಯಲಾಗಿದೆ ಎಂದರು.

ಆಕೆ ತನ್ನದೇ ಮಗು ಎಂದು ಒಪ್ಪಿಕೊಂಡಿದ್ದಾಳೆ. ಏಳುವರೆ‌ಯಿಂದ ಎಂಟು ತಿಂಗಳು ನಡುವಯಸ್ಸಿನ ಭ್ರೂಣ, ಯಾವುದೇ ಪ್ರೊಸೀಜರ್ ಇಲ್ಲದೆ ಅಬಾರ್ಷನ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ. ಏಕಾಏಕಿ ಹೊಟ್ಟೆ ನೋವು ಬಂದಿರುವುದರಿಂದ ಶೌಚಾಲಯಕ್ಕೆ ತೆರಳಿದ್ದಾಳೆ. ಶೌಚಾಲಯದಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾಳೆ. ಸದ್ಯ ಆಫ್ರಿನಾ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಕೆಲವೊಂದು ಅನುಮಾನಾಸ್ಪದ ಆಡಿಯೋಗಳು ವೈರಲ್ ಆಗಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ