ಉಡುಪಿ ನಗರ ಪೊಲೀಸರ ರಾತ್ರಿ ಕಾರ್ಯಾಚರಣೆ – ಅಕ್ರಮ ಚಟುವಟಿಕೆ ನಡೆಸುವವರಿಗೆ ವಾರ್ನಿಂಗ್

ಉಡುಪಿ : ಉಡುಪಿ ನಗರದಲ್ಲಿ ತಡರಾತ್ರಿ ಕಾರ್ಯಾಚರಣೆಗಿಳಿದ ಪೊಲೀಸರು, ಅಕ್ರಮ ಚಟುವಟಿಕೆ ನಡೆಸುವವರಿಗೆ ವಾರ್ನಿಂಗ್ ನೀಡಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾಮಚಂದ್ರ ನೇತೃತ್ವದಲ್ಲಿ ಪೊಲೀಸರು ರೌಂಡ್ಸ್ ನಡೆಸಿದರು.

ನಗರದ ಬಸ್ ನಿಲ್ದಾಣಗಳ ಆಸುಪಾಸಿನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ
ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಗರ ಪೊಲೀಸರು ಮುಂದಾಗಿದ್ದಾರೆ. ಇದರ ಭಾಗವಾಗಿ ಬಸ್‌ನಿಲ್ದಾಣ ಪರಿಸರದಲ್ಲಿ ತಡ ರಾತ್ರಿಯವರೆಗೂ ನಿಂತಿದ್ದ ಜನರನ್ನು ತೆರವು ಮಾಡಿದ ಪೊಲೀಸರು‌, ವಾರ್ನಿಂಗ್ ಮಾಡಿದರು. ಬಸ್ ನಿಲ್ದಾಣದಲ್ಲಿ ರಾತ್ರಿಯಾಗುತ್ತಿದ್ದಂತೆ ಮಂಗಳಮುಖಿಯರ ಕಾಟವೂ ಹೆಚ್ಚುತ್ತಿದ್ದು ಎಲ್ಲರನ್ನೂ ಎಚ್ಚರಿಕೆ ನೀಡಿ ಕಳಿಸಲಾಯಿತು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ