ಅಕ್ರಮ ಬಾಂಗ್ಲಾ ಪ್ರಜೆಗಳು 7 ಮಂದಿಯೂ ಕಟ್ಟಡ ಕಾರ್ಮಿಕರಲ್ಲ : ಎಸ್‌.ಪಿ.ಅರುಣ್‌

ಮಲ್ಪೆ : ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ 7 ಮಂದಿಯೂ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಕೊಂಡಿಲ್ಲ ಎನ್ನುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಲ್ಲ ಎಂದು ಕಾರ್ಮಿಕ ಇಲಾಖೆ ದೃಢಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಮನೆಯ ಮಾಲಕರು, ಕಟ್ಟಡ ಮಾಲಕರು ಸೇರಿದಂತೆ ಆರೋಪಿಗಳ ಸಂಪರ್ಕದಲ್ಲಿದ್ದವರ ಹೆಚ್ಚಿನ ವಿಚಾರಣೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ| ಕೆ. ಅರುಣ್‌ ತಿಳಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ