ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ

ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಡೆಂಗ್ಯು, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಹೆಚ್ಚಾಗಿದೆ. ಆದ್ದರಿಂದ ಸಾರ್ವಜನಿಕರು ಜ್ವರ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ಕೂಡಲೇ ಸಮೀಪದ ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಚಿಕಿತ್ಸೆ ಪಡೆಯಬೇಕು. ಕುಡಿಯಲು ಕಾಯಿಸಿ ಆರಿಸಿದ ನೀರನ್ನೇ ಉಪಯೋಗಿಸಬೇಕು.

ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಗೂಡಂಗಡಿ ಮಾಲಕರು ತಮ್ಮಲ್ಲಿರುವ ಎಳನೀರು ಬೊಂಡವನ್ನು ಅಂದೇ ವಿಲೇವಾರಿ ಮಾಡಬೇಕು. ಹಾಗೂ ಚರಂಡಿಗೆ ಕಸ ಕಡ್ಡಿ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯದಂತೆ ಸೂಚನೆ ನೀಡಲಾಗಿದೆ.

ನಗರಸಭೆ, ತನ್ನ ವ್ಯಾಪ್ತಿಯಲ್ಲಿ ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದು, ಸರ್ವೆ ನಡೆಸಿ ಜಾಗೃತಿ ಮೂಡಿಸುವ ಜೊತೆಗೆ ಅಂಗಡಿಯ ಸುತ್ತಮುತ್ತಲು ಇರುವ ಕಸ ತ್ಯಾಜ್ಯಗಳನ್ನು ಸಂಗ್ರಹಿಸಿ ನಗರಸಭೆಗೆ ವಿಲೇವಾರಿ ಮಾಡಲು ಸೂಚಿಸಲಾಗಿದೆ.

ಇದರ ಹೊರತಾಗಿಯೂ ಯಾವುದೇ ಉದ್ದಿಮೆ, ಹೋಟೆಲ್, ಫಾಸ್ಟ್‌ಫುಡ್ ಸ್ಟಾಲ್, ಗೂಡಂಗಡಿಗಳು ಈ ಬಗ್ಗೆ ಕ್ರಮ ವಹಿಸದೇ ಇದ್ದಲ್ಲಿ 5000 ರೂ. ದಂಡ ವಿಧಿಸುವುದರೊಂದಿಗೆ ಅಂತಹ ಉದ್ದಿಮೆಗಳ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗುವುದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !