ನ.26 ‘ಸಂವಿಧಾನ ದಿವಸ್’ ಆಚರಣೆ, ‘ಸಂವಿಧಾನ ಸಮ್ಮಾನ್’ ಅಭಿಯಾನಕ್ಕೆ ಚಾಲನೆ

ಉಡುಪಿ : ಸಂವಿಧಾನ ಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಂದ ರಚಿಸಲ್ಪಟ್ಟಿರುವ ಭಾರತದ ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ‘ಸಂವಿಧಾನ ಸಮ್ಮಾನ್ ಅಭಿಯಾನ’ವು ದೇಶಾದ್ಯoತ ನ.26ರಿಂದ ಜ.26ರ ವರೆಗೆ ನಡೆಯಲಿದೆ.

ಉಡುಪಿ ಜಿಲ್ಲೆಯಲ್ಲಿ ನ.26 ಮಂಗಳವಾರ ಬೆಳಿಗ್ಗೆ ಗಂಟೆ 10.00ಕ್ಕೆ ‘ಸಂವಿಧಾನ ದಿವಸ್’ ಆಚರಣೆ ಮತ್ತು ‘ಸಂವಿಧಾನ ಸಮ್ಮಾನ್’ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮವು ಧಾರ್ಮಿಕ ಮುಖಂಡ, ದಲಿತ ಸಮುದಾಯದ ನಾಯಕ ಗೋಕುಲ್ ದಾಸ್ ಬಾರ್ಕೂರು ಅವರ ಅಧ್ಯಕ್ಷತೆಯಲ್ಲಿ ಉಡುಪಿ ಅಂಬಲಪಾಡಿಯ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ನಡೆಯಲಿದೆ.

ಮಾಜಿ ಸಚಿವ ಎನ್. ಮಹೇಶ್ ಹಾಗೂ ಸಾಮಾಜಿಕ ಚಿಂತಕ ಚರಣ್ ಗುಂಜೂರು ಬೆಂಗಳೂರು ಇವರು ಪ್ರಮುಖ ಭಾಷಣಕಾರರಾಗಿ ಸಂವಿಧಾನದ ಆಶಯಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಜಿಲ್ಲೆಯ ಶಾಸಕರುಗಳ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಪ್ರಬುದ್ಧರು ಹಾಗೂ ಸಂವಿಧಾನದ ಆಶಯಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲಿಚ್ಚಿಸುವ ಆಸಕ್ತರು ಭಾಗವಹಿಸಲಿದ್ದಾರೆ ಎಂದು ‘ಸಂವಿಧಾನ ಸಮ್ಮಾನ್’ ಅಭಿಯಾನದ ಜಿಲ್ಲಾ ಸಂಚಾಲನಾ ಸಮಿತಿಯ ಸಂಚಾಲಕಿ ರೇಷ್ಮಾ ಉದಯ ಶೆಟ್ಟಿ ಮತ್ತು ಸಹ ಸಂಚಾಲಕ ಉಮೇಶ್ ಎ. ನಾಯ್ಕ್ ಚೇರ್ಕಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್