ರಾಜಕೀಯ ದುರುದ್ದೇಶದಿಂದ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಹಾನಿ ಉಂಟುಮಾಡಿರುವ A.B.V.P ನಡೆಗೆ N.S.U.I ಖಂಡನೆ

ಎಬಿವಿಪಿ ಸಂಘಟನೆಯು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ಬಿಡುಗಡೆಗೊಳಿಸುವಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆಯ ನೆಪದಲ್ಲಿ ಗೂಂಡಾಗಿರಿ ನಡೆಸಿದ್ದು, ವಿಶ್ವವಿದ್ಯಾನಿಲಯದ ಗಾಜುಗಳಿಗೆ ಹಾನಿ ಮಾಡಿರುವುದಲ್ಲದೆ, ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನು ಎನ್‌ಎಸ್‌ಯು‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲು ಎನ್‌ಎಸ್‌ಯು‌ಐ ಮುಖಂಡ‌ ಸುಹಾನ್ ಆಳ್ವ ಆಗ್ರಹಿಸಿದ್ದಾರೆ.

ಅಂಕಪಟ್ಟಿ ವಿಷಯಕ್ಕೆ ಸಂಬಂಧಿಸಿದಂತೆ ಎನ್‌ಎಸ್‌ಯು‌ಐ ಜಿಲ್ಲಾ ಮತ್ತು ಉಳ್ಳಾಲ ಸಮಿತಿ ವತಿಯಿಂದ ಸಭಾಧ್ಯಕ್ಷರಾದ ಯು.ಟಿ ಖಾದರ್ ಮತ್ತು ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ್‌ರವರ ಗಮನಕ್ಕೆ ತಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಈ ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡಿದ್ದಾರೆ.

ಆದರೆ ಇದೀಗ ಎಬಿವಿಪಿ ಸಂಘಟನೆಯು ರಾಜಕೀಯ ಲಾಭಕ್ಕೋಸ್ಕರ ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಹಾನಿ ಮಾಡಿರುವ ಜೊತೆಗೆ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆಗಳನ್ನು ದೇವಾಲಯದಂತೆ ಕಾಣುವ ಸಮಾಜದಲ್ಲಿ ಎಬಿವಿಪಿ ಕಾರ್ಯಕರ್ತರ ಈ ವರ್ತನೆಯು ಅವರ ನೈಜ ಮುಖವಾಡವನ್ನು ತೋರಿಸುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆಯು ಗೂಂಡಾಗಿರಿ ನಡೆಸಿದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇವೆ ಎಂದು ಅವರು ತಿಳಿಸಿದರು.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ