ಗಂಗೊಳ್ಳಿ ಪಂಚಾಯತ್‌ನಲ್ಲಿ ಮುಸ್ಲಿಂ ಮೌಲ್ವಿಯ ಪ್ರಾರ್ಥನೆಗೆ ಆಕ್ಷೇಪ; ಶಾಸಕರ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ನಡೆಸಿದ ವಿಡಿಯೋವನ್ನು ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಕ್ರೋಶ ವ್ಯಕ್ತಪಡಿಸಿವೆ.

ಈ ಸಂಬಂಧ ಇಂದು ಬೈಂದೂರು ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಯಿತು. ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡೆಯನ್ನು ಖಂಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಕಾಂಗ್ರೆಸ್‌ನವರು ಅಧಿಕಾರಕ್ಕಾಗಿ ಕಾನೂನು ಬಾಹಿರ ಕೃತ್ಯ ನಡೆಸುತ್ತಿದ್ದಾರೆ. ಈ ಮೊದಲು ಎಸ್‌ಡಿಪಿಐ‌ಯನ್ನು ವಿರೋಧಿಸುತ್ತಿದ್ದ ಕಾಂಗ್ರೆಸ್ ಈಗ ಆ ಪಕ್ಷದೊಂದಿಗೆ ಕೈಜೋಡಿಸಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ತಕ್ಷಣ ಒಟ್ಟು ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ದೂರಿದರು.

ಇಲ್ಲಿ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ – ಎಸ್‌ಡಿಪಿಐ ಅಧಿಕಾರ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಪಂಚಾಯತ್ ಉಪಾಧ್ಯಕ್ಷರು ಅಧಿಕಾರ ಸ್ವೀಕರಿಸುವ ವೇಳೆ ಮುಸ್ಲಿಂ ಮೌಲ್ವಿಯಿಂದ ಪ್ರಾರ್ಥನೆ ನಡೆಸಿದ್ದರು. ಇದು ವಿವಾದವಾಗುತ್ತಿದ್ದಂತೆ ಇಂದು ಕಾಂಗ್ರೆಸ್ ಸದಸ್ಯೆ ಜಯಂತಿ ಖಾರ್ವಿ ನೇತೃತ್ವದಲ್ಲಿ ಗಣಹೋಮ ನಡೆದಿತ್ತು.

Related posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ : ಇಬ್ಬರ ಬಂಧನ; ಯುವತಿಯ ರಕ್ಷಣೆ

ಬೈಕ್‌ನಲ್ಲಿ ಅಪಾಯಕಾರಿ ವೀಲಿಂಗ್‌ ಮಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

“ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆ!