ಬೆಂಗಳೂರಿನ ಕನ್ನಡ ಭವನದಲ್ಲಿ ಅಧಿಕಾರ ಸ್ವೀಕರಿಸಿದ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಪದಾಧಿಕಾರಿಗಳು

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳಿಗೆ ಸರ್ಕಾರದಿಂದ ನಾಮ ನಿರ್ದೇಶನಗೊಂಡಿದ್ದ ಅಧ್ಯಕ್ಷರು ಹಾಗೂ ಸದಸ್ಯರು ಗುರುವಾರ ಕನ್ನಡ ಭವನದಲ್ಲಿ ಅಧಿಕಾರ ಸ್ವೀಕರಿಸಿದರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜ ಮೂರ್ತಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ. ರಮೇಶ್, ಕರ್ನಾಟಕ ಬಂಜಾರ ಅಕಾಡೆಮಿ ಅಧ್ಯಕ್ಷ ಡಾ.ಎ.ಆರ್. ಗೋವಿಂದಸ್ವಾಮಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಮಾನಸಾ ಸೇರಿ ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು ಹಾಗೂ ಸದಸ್ಯರು ತಮ್ಮ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪದಗ್ರಹಣ ಮಾಡಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಡಾ. ತಲ್ಲೂರು ಶಿವರಾಮ ಶೆಟ್ಟಿ, ಯಕ್ಷಗಾನ ಉಳಿದರೆ ಕನ್ನಡ ಹಾಗೂ ಅಕಾಡೆಮಿ ಉಳಿಯುತ್ತದೆ. ಯಕ್ಷಗಾನ ರಾಜ್ಯದ, ದೇಶದ ಕಲೆಯಾಗಬೇಕು. ಯಕ್ಷಗಾನ, ಮೂಡಲಪಾಯದ ಏಳೆಗೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕಿದೆ. ಜನರು ಹಾಗೂ ಸರ್ಕಾರ ಇಬ್ಬರೂ ಒಟ್ಟುಗೂಡಿ ಕಲೆ ಉಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ಧರಣೀದೇವಿ ಮಾಲಗತ್ತಿ, ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್, ಸಾಹಿತಿಗಳಾದ ಗೊ.ರು. ಚನ್ನಬಸಪ್ಪ, ಡಾ.ಕೆ. ಮರುಳ ಸಿದ್ದಪ್ಪ, ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಎಚ್.ಎಲ್. ಪುಷ್ಪ ಸೇರಿ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ಅಭಿನಂದಿಸಿದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್