ಉಡುಪಿ ಸಂತೆಕಟ್ಟೆಯಲ್ಲಿ ಪಲ್ಟಿಯಾಗಿ ಹೊಂಡಕ್ಕೆ ಉರುಳಿ ಬಿದ್ದ ಆಯಿಲ್ ಟ್ಯಾಂಕರ್

ಉಡುಪಿ : ರಾಷ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಬಳಿ ಟ್ಯಾಂಕ‌ರ್ ಒಂದು ಪಲ್ಟಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದೆ.

ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಬೃಹತ್ ಗಾತ್ರದ ಹೊಂಡವನ್ನು ಸ್ಥಳದಲ್ಲಿ ನಿರ್ಮಿಸಲಾಗಿದೆ. ಇದರೊಳಗೆ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದಿದೆ.

ಆಮೆಗತಿ ಕಾಮಗಾರಿಯಿಂದಾಗಿ ಈ ಹೆದ್ದಾರಿಯಲ್ಲಿ ಸಂಚಾರಿಸುವ ವಾಹನ ಸವಾರರು ದಿನನಿತ್ಯ ಹೆದ್ದಾರಿ ಇಲಾಖೆಗೆ, ಜನಪ್ರತಿನಿಧಿಗಳಿಗೆ, ಜಿಲ್ಲಾಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಇನ್ನಾದರೂ ಜಿಲ್ಲಾಡಳಿತ ಇತ್ತ ಗಮನ ಹರಿಸುತ್ತದೋ ಕಾದು ನೋಡಬೇಕು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ