ಹೊರ ಜಿಲ್ಲೆಯ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೃದ್ಧರೊಬ್ಬರು ಯಾರೂ ಇಲ್ಲದ ಸಂದರ್ಭ ನೋಡಿ ಕಿಟಕಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆ ಇಂದಿರಾನಗರದ 8ನೇ ತಿರುವಿನಲ್ಲಿ ಮಂಗಳವಾರ ನಡೆದಿದೆ.

ವೃದ್ಧರನ್ನು ಹೊರ ಜಿಲ್ಲೆಯ 85 ವರ್ಷದ ಭೀಮಪ್ಪ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯ ಶೇಖರ್ ಹೆಡ್ ಕಾನ್ಸ್ಟೇಬಲ್, ಹರೀಶ್ ಮಾಳ ಘಟನಾ ಸ್ಥಳಕ್ಕೆ ಬಂದು ಮಹಜರು ಪ್ರಕ್ರಿಯೆ ನಡೆಸಿದರು.

ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ