ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗವು ಪ್ರತಿವರ್ಷ ನಡೆಸುತ್ತಾ ಬಂದ ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 23.06.2024, ಭಾನುವಾರ ಅಪರಾಹ್ನ 3.00 ಗಂಟೆಗೆ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್‌ನ ಸಭಾಂಗಣದಲ್ಲಿ ಜರಗಲಿದೆ.
ಮೂಡಬಿದ್ರೆ ಶ್ರೀ ಜೈನ ಮಠದ ಸ್ವಸ್ತಿ ಶ್ರೀಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಮಹಾಸ್ವಾಮಿಗಳು ಅನುಗ್ರಹ ಸಂದೇಶ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಡಾ. ಎಂ. ಬಿ. ಪುರಾಣಿಕ್ ಅವರ ಅಧ್ಯಕ್ಷತೆಯಲ್ಲಿ ಜರಗಲಿರುವ ಕಾರ್ಯಕ್ರಮದಲ್ಲಿ ವಿದ್ವಾನ್ ಪಂಜ ಭಾಸ್ಕರ ಭಟ್, ಶ್ರೀ ಕೃಷ್ಣಪ್ರಸಾದ್ ಅಡ್ಯಂತಾಯ, ಡಾ. ಆದರ್ಶ ಹೆಬ್ಬಾರ್ ಹಾಗೂ ಶ್ರೀಮತಿ ರಜನಿ ಹೆಬ್ಬಾರ್ ಅಭ್ಯಾಗತರಾಗಿ ಪಾಲ್ಗೊಳ್ಳಲಿರುವರು.
ಈ ಸಂದರ್ಭದಲ್ಲಿ ಮಟ್ಟಿ ಮುರಲೀಧರ ರಾವ್ ಹಾಗೂ ಪಂಡಿತ ಪೆರ್ಲ ಕೃಷ್ಣ ಭಟ್ ಪ್ರಶಸ್ತಿಯನ್ನು ಕ್ರಮವಾಗಿ ಶ್ರೀ ಜಬ್ಬಾರ್ ಸಮೊ ಮತ್ತು ಶ್ರೀ ಸೇರಾಜೆ ಸೀತಾರಾಮ ಭಟ್ ಇವರಿಗೆ ಪ್ರದಾನ ಮಾಡಲಾಗುವುದು.
ಸಭಾ ಕಾರ್ಯಕ್ರಮದ ಬಳಿಕ ‘ಸೀತಾಪಹಾರ’ ತಾಳಮದ್ದಲೆ ಪ್ರಸ್ತುತಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ.