ಮಾರ್ಚ್ ಬಳಿಕ (ನಾಳೆ) ಜೂನ್ 12ರಂದು ಉಸ್ತುವಾರಿ ಸಚಿವೆಯ ಜಿಲ್ಲಾ ಪ್ರವಾಸ ನಿಗದಿ!

ಉಡುಪಿ : ಕಳೆದ ಮಾರ್ಚ್ ತಿಂಗಳಿನಲ್ಲಿ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೂನ್ 12ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಮಯದಲ್ಲಾಗಲೀ ಪಕ್ಷದ ಪ್ರಚಾರಕ್ಕೆ ಆಗಮಿಸದ ಸಚಿವೆಯ ನಡೆ ಸ್ವಪಕ್ಷೀಯರಿಂದಲೇ ತೀವ್ರ ಟೀಕೆಗೆ ಗುರಿಯಾಗಿತ್ತು. ಕೊನೆಗೂ ಬುಧವಾರ ಅವರ ಪ್ರವಾಸ ನಿಗದಿಯಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಜೂನ್ 12ರಂದು ಬೆಳಗ್ಗೆ 10:30ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ, ಅಲ್ಲಿಂದ 12:00ಗಂಟೆಗೆ ಉಡುಪಿಗೆ ಆಗಮಿಸಿ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಂಜೆ 4:00ಗಂಟೆಗೆ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ 6 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ