ದಕ್ಷಿಣ ಕನ್ನಡದಲ್ಲಿ ಒಂದು ಕಾಲರ ಪ್ರಕರಣ ಪತ್ತೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಎಂಬಲ್ಲಿ ಒಂದು ಕಾಲರಾ ಪ್ರಕರಣ ಪತ್ತೆಯಾಗಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಹೆಚ್ ಆರ್ ತಿಮ್ಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರಿನಲ್ಲಿ ವ್ಯಕ್ತಿಯೊಬ್ಬರಿಗೆ ವಾಂತಿ ಭೇಧಿ ಪ್ರಕರಣ ಕಂಡು ಬಂದಿತ್ತು. ಆರೋಗ್ಯ ಇಲಾಖೆಯ ತಂಡ ಪರಿಶೀಲನೆ ನಡೆಸಿದಾಗ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಎಂಬಲ್ಲಿ ಕಾಲರ ಇರುವುದು ಪತ್ತೆಯಾಗಿತ್ತು. ಈತನ ಮಲದ ಮಾದರಿ ಪರೀಕ್ಷೆ ನಡೆಸಿದಾಗ ಕಾಲರಾ ಪತ್ತೆಯಾಗಿತ್ತು. ಈತನಿಗೆ ಚಿಕಿತ್ಸೆ ನೀಡಲಾಗಿದ್ದು, ಗುಣಮುಖನಾಗಿದ್ದಾನೆ.

ಈ ವ್ಯಕ್ತಿ ಕಾರ್ಕಳ ತಾಲೂಕಿನ ಹೊಸ್ಮಾರು ಎಂಬಲ್ಲಿ ಹೋಟೆಲೊಂದರ ಆಹಾರ ಸೇವಿಸಿ ಕಾಲರ ಹರಡಲು ಕಾರಣವಾಗಿತ್ತು. ಇದೇ ಹೋಟೆಲ್‌ನ ಆಹಾರ ಸೇವಿಸಿದ ಉಡುಪಿ ಜಿಲ್ಲೆಯ ಕೆಲವರಿಗೆ ಸೋಂಕು ಹರಡಿತ್ತು. ಸೋಂಕಿನ ಮೂಲವಿದ್ದ ಹೋಟೆಲ್‌ನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ