ಟ್ರೇಡಿಂಗ್ ಹೆಸರಿನಲ್ಲಿ 16.78 ಲಕ್ಷ ರೂ. ಆನ್‌ಲೈನ್ ವಂಚನೆ – ಪ್ರಕರಣ ದಾಖಲು

ಉಡುಪಿ : ಷೇರು ಮಾರುಕಟ್ಟೆ ಟ್ರೇಡಿಂಗ್‌ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್‌ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿಗೆ ಹಣ ನೀಡುವುದಾಗಿ ತಿಳಿಸಿದ್ದರು. ಅದರಂತೆ ರಫಿಯತ್ ಅವರಿಂದ ದುಷ್ಕರ್ಮಿಗಳು ಒಟ್ಟು 16,78,500ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ