ಉಡುಪಿ : ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆನ್‌ಲೈನ್ ಟ್ರೇಡಿಂಗ್ ಮೂಲಕ ವಂಚಿಸುತ್ತಿದ್ದ ಇಬ್ಬರನ್ನು ಬಂಧಿಸಿ ಅವರಿಂದ 13,95,000 ರೂ. ನಗದು ವಶಪಡಿಸಿಕೊಂಡಿದೆ.
ಆರೋಪಿಗಳು ವಾಟ್ಸಾಪ್ ಕರೆಮಾಡಿ ಕಸ್ಟಮ್ಸ್‌ನಿಂದ ಕರೆಮಾಡುತ್ತಿರುವುದಾಗಿ ತಿಳಿಸಿ ನಿಮ್ಮ ಆಧಾರ್ ನಂಬ್ರ ಬಳಸಿ ಬುಕ್ ಆಗಿರುವ FedEx ಕೋರಿಯರ್‌ನಲ್ಲಿ 5 ಪಾಸ್‌ಪೋರ್ಟ್, 5 ಎ.ಟಿ.ಎಮ್ ಕಾರ್ಡ್, 200 ಗ್ರಾಂ ಎಂ.ಡಿ.ಎಮ್.ಎ ಹಾಗೂ 5000 USD ಇದ್ದು ಸದ್ರಿ ಕೋರಿಯರ್ ಪ್ರಸ್ತುತ ಮುಂಬಯಿ ಕಸ್ಟಮ್ಸ್‌ರವರ ವಶದಲ್ಲಿ ಇರುವುದಾಗಿ ತಿಳಿಸಿದ್ದಾರೆ. ದೂರುದಾರರು ಕೋರಿಯರ್ ಮಾಡಿಲ್ಲ ಎಂದು ತಿಳಿಸಿದಾಗ ಆರೋಪಿಗಳು ಆತನ ಮೇಲಾಧಿಕಾರಿಯವರಿಗೆ ಹಾಟ್‌ಲೈನ್ ಮೂಲಕ ಸಂಪರ್ಕ ಕಲ್ಪಿಸಿಕೊಟ್ಟಿದ್ದು, ಸದ್ರಿ ಹಾಟ್‌ಲೈನ್‌ನಲ್ಲಿ ಪೊಲೀಸ್ ಅಧಿಕಾರಿ ಎಂದು ನಂಬಿಸಿ ದೂರುದಾರರಿಗೆ ನಿಮ್ಮ ಆಧಾರ್ ಕಾರ್ಡ್‌ನ ದುರ್ಬಳಕೆಯ ಬಗ್ಗೆ ದೂರನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿ ನಮ್ಮ ಕೇಂದ್ರ ಕಚೇರಿಗೆ ಕರೆಯನ್ನು ಫಾರ್ವಡ್ ಮಾಡುವುದಾಗಿ ತಿಳಿಸಿ ನಂತರದಲ್ಲಿ ಕರೆ ಸ್ವೀಕರಿಸಿದ ವ್ಯಕ್ತಿ ನಿಮ್ಮ ಆಧಾರ್ ಕಾರ್ಡ್ ವಿವಿಧ ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿದ್ದು ಹಾಗೂ ಭಯೋತ್ಪಾದಕರು ಸಿಮ್ ಖರೀದಿಸಲು ಬಳಸಿರುವುದಾಗಿ ತಿಳಿಸಿರುತ್ತಾರೆ. ಈ ದೂರಿಗೆ ಸಂಬಂಧಿಸಿ ನಿಮ್ಮನ್ನು ವರ್ಚುವಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದು Skype App ಮೂಲಕ ವಿಡಿಯೋ ಮಾನಿಟರಿಂಗ್ ಮಾಡುವುದಾಗಿ ತಿಳಿಸಿ ಬೆದರಿಸಿದ್ದರು. ಬಳಿಕ ಹಂತ ಹಂತವಾಗಿ ಒಟ್ಟು ರೂಪಾಯಿ 1,33,81,000 ರೂ.ಹಣವನ್ನು ವರ್ಗಾಯಿಸಿರುತ್ತಾರೆ. ಈ ಬಗ್ಗೆ ಅರುಣ್ ಕುಮಾರ್ ಗೋವಿಂದ ಕರ್ನವರ್ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.