ಉಪಚುನಾವಣೆ ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿ – ಡಿಕೆಶಿಯಿಂದ ಕೊಲ್ಲೂರು ಮೂಕಾಂಬಿಕೆ ದರ್ಶನ

ಕೊಲ್ಲೂರು : ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಕೊಲ್ಲೂರಿಗೆ ಆಗಮಿಸಿದ್ದಾರೆ.

ಭಾರಿ ಮಹತ್ವ ಪಡೆದಿರುವ ರಾಜ್ಯದ ಮೂರು ಉಪಚುನಾವಣೆಗಳ ಫಲಿತಾಂಶಕ್ಕೆ ಇನ್ನು ಒಂದೇ ದಿನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮಾಡಲು ಇಲ್ಲಿಗೆ ಆಗಮಿಸಿದರು.

ರಾಜ್ಯ ಸರ್ಕಾರಕ್ಕೆ ಉಪಚುನಾವಣೆ ಗೆಲುವು ಅತಿ ಮುಖ್ಯವಾಗಿದ್ದು ಈ ಹಿನ್ನೆಲೆಯಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲು ಅವರು ಇಲ್ಲಿಗೆ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬೈಂದೂರಿಗೆ ಬಂದಿಳಿದ ಡಿಸಿಎಂಗೆ ಕಾಂಗ್ರೆಸ್ ಮುಖಂಡರು ಮತ್ತು ಜಿಲ್ಲಾಡಳಿತದ ಮುಖ್ಯಸ್ಥರು ಸ್ವಾಗತ ಕೋರಿದರು. ಬಳಿಕ ಡಿಕೆಶಿ ಕಾರಿನ ಮೂಲಕ ಮೂಲಕ ದೇವಸ್ಥಾನಕ್ಕೆ ತೆರಳಿದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ