ಉಡುಪಿ ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್ – ಬಿರುಸಿನ ಮಳೆ ಸಾಧ್ಯತೆ

ಉಡುಪಿ : ಜಿಲ್ಲೆಯಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಆರೆಂಜ್ ಅಲರ್ಟ್‌ ಘೋಷಿಸಿದೆ. ಇಂದು ಬೆಳಿಗ್ಗಿನಿಂದ ಜಿಲ್ಲೆಯ ಹಲವೆಡೆ ಬಿರುಸಿನ ಮಳೆಯಾಗುತ್ತಿದೆ.

ಇಂದು ಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್‌ ಅಲರ್ಟ್‌ ಮತ್ತು ಸೆಪ್ಟೆಂಬರ್ 1, 2ರಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ