ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಶುಕ್ರವಾರದಿಂದ ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ಶೇಂದಿ ಅಂಗಡಿ ಮತ್ತು ಎಲ್ಲ ಮದ್ಯದಂಗಡಿಗಳನ್ನು ಮುಚ್ಚಲು, ಎಲ್ಲ ವಿಧದ ಅಮಲು ಪದಾರ್ಥಗಳ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಗರ ಪೊಲೀಸ್ ಕಮಿಷನರೇಟ್‌ನ ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬುವವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಮೃತ ವ್ಯಕ್ತಿಯು ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರು. ಜಿಲ್ಲೆಯಲ್ಲಿ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿರುವ ಕಾರಣ, ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ.

ಈ ಕಾರಣಕ್ಕೆ ಮೇ 2ರಿಂದ ಮೇ 3ರ ಬೆಳಿಗ್ಗೆ 6 ಗಂಟೆವರೆಗೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮದ್ಯದಂಗಡಿ ಮುಚ್ಚಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

Related posts

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ