‘ನಮ್ಮ ಭೂಮಿ ನಮ್ಮ ಹಕ್ಕು’ಅಭಿಯಾನ – ಉಡುಪಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ : ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ಅಭಿಯಾನದಡಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹ ನಡೆಯಿತು.

ಬೆಳಿಗ್ಗೆ ಗಂಟೆ 10 ಗಂಟೆಗೆ ಪ್ರಾರಂಭವಾದ ಧರಣಿ ಸಂಜೆಯವರೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ನಡೆಯಲಿದೆ.

ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ, ಒಡೆದು ಆಳುವ ನೀತಿ, ಸ್ವಾರ್ಥ ರಾಜಕಾರಣದ ಫಲವಾಗಿ ರೈತರ, ಮಠಮಾನ್ಯಗಳ ಅಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಬಿಜೆಪಿ ಮುಖಂಡರು ಈ ಸಂದರ್ಭ ಖಂಡಿಸಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಧರಣಿಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಮುಖಂಡರು ಸಹಿತ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಪದಾಧಿಕಾರಿಗಳು ಭಾಗಿಯಾದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ