ಸರಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಸಾರ್ವಜನಿಕರಿಂದ ಆಕ್ರೋಶ

ಉಡುಪಿ : ನಗರದ ಅಜ್ಜರ ಕಾಡುವಿನಲ್ಲಿರುವ ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಹೇಳಿದರೆ ಇಲ್ಲಿನ ವೈದ್ಯಾಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ರೋಗಿಗಳ ಸಂಬಂಧಿಕರು ಮತ್ತು ಸಾರ್ವಜನಿಕರು ಆಕ್ರೋಶ ಹೊರಹಾಕಿದ ಪ್ರಸಂಗ ನಡೆದಿದೆ‌.

ಅಜ್ಜರಕಾಡುವಿನ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಏರಿದ್ದು ಸದ್ಯ ಹೊಸ ಕಟ್ಟಡದ ಕಾಮಗಾರಿ ನಡೆಯುತ್ತಿದೆ. ಆದರೆ ಹಳೆಯ ಸರ್ಕಾರಿ ಆಸ್ಪತ್ರೆ ಇನ್ನೂ ಮೇಲ್ದರ್ಜೆಗೆ ಏರಿಲ್ಲ. ಮುಖ್ಯವಾಗಿ ಐಸಿಯುನಲ್ಲಿ ಇಲ್ಲಿ ಯಾವುದೇ ವ್ಯವಸ್ಥೆಗಳಿಲ್ಲ. ಗಂಭೀರ ಕಾಯಿಲೆ ಇರುವ ರೋಗಿಗಳು ಅಥವಾ ಎಮರ್ಜೆನ್ಸಿ ಕೇಸ್ ಬಂದಾಗ ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲ. ಇಲ್ಲಿನ ವೈದ್ಯಾಧಿಕಾರಿಗಳು ಮಂಗಳೂರಿನ ವೆನ್‌ಲಾಕ್‌ಗೆ ಹೋಗಿ ಎಂಬ ಉತ್ತರ ನೀಡುತ್ತಾರೆ. ಐಸಿಯುನಲ್ಲಿ ಬೆಡ್ ಬಗ್ಗೆ ವಿಚಾರಿಸಿದ್ದಕ್ಕೆ ಐಸಿಯು‌ನಲ್ಲಿರುವ ರೋಗಿ ಸತ್ತ ಮೇಲೆ ನಿಮಗೆ ಬೆಡ್ ಕೊಡುತ್ತೇವೆ ಎಂದು ಉಡಾಫೆ ಉತ್ತರ ನೀಡಿದ್ದಾಗಿ ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ತಕ್ಷಣ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಉಸ್ತುವಾರಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಉಡುಪಿ ಶಾಸಕರು ಜಿಲ್ಲಾಸ್ಪತ್ರೆಯ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸಬೇಕು, ಇಲ್ಲದಿದ್ದಲ್ಲಿ ಬಡ ರೋಗಿಗಳು ಇನ್ನಷ್ಟು ಸಮಸ್ಯೆಗೆ ಈಡಾಗಬೇಕಾಗುತ್ತದೆ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ