ಸ್ಪೀಕರ್ ಯು.ಟಿ.ಖಾದರ್ ಮೇಲಿನ ಆಕ್ರೋಶ; ತಪ್ಪಾಗಿ ಗ್ರಹಿಸಿದ ಡಿವೈಎಫ್ಐ ಕಾರ್ಯಕರ್ತರಿಂದ ಕೇಂದ್ರ ಸಚಿವರ ಕಾರಿಗೆ ಮುತ್ತಿಗೆ

ಉಳ್ಳಾಲ : ರಸ್ತೆಹೊಂಡಕ್ಕೆ ಸ್ಕೂಟರ್ ಬಿದ್ದು ರಸ್ತೆಗೆಸೆಯಲ್ಪಟ್ಟ ಸಹಸವಾರೆ ಮೇಲೆಯೇ ಟ್ಯಾಂಕರ್‌ ಹರಿದು ಆಕೆ ಮೃತಪಟ್ಟ ಹಿನ್ನೆಲೆಯಲ್ಲಿ ರಸ್ತೆತಡೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರು ಸ್ಪೀಕರ್ ಯು.ಟಿ.ಖಾದರ್ ಅವರ ಕಾರು ಎಂದು ಕೇಂದ್ರ ಸಚಿವ ಶ್ರೀಪಾದ ಯಸ್ಸೋ ನಾಯಕ್ ಅವರ ಕಾರಿಗೆ ಮುತ್ತಿಗೆ ಹಾಕಿದ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಶನಿವಾರ ಸಂಜೆ ನಡೆದಿದೆ.

ತೊಕ್ಕೊಟ್ಟು-ಕೊಣಾಜೆ ರಸ್ತೆಯ ಸೇವಾಸೌಧದ ಮುಂಭಾಗ ರಸ್ತೆಗುಂಡಿಗೆ ಬಿದ್ದ ಸ್ಕೂಟರ್‌ನಿಂದ ರಸ್ತೆಗೆಸೆಯಲ್ಪಟ್ಟ ಮಹಿಳೆಯ ಮೇಲೆಯೇ ಟ್ಯಾಂಕರ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ನಡೆದ ಬೆನ್ನಲ್ಲೇ ಸ್ಥಳೀಯರು ಆಕ್ರೋಶಕ್ಕೀಡಾಗಿ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಶನಿವಾರ ಸಂಜೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು.

ರಾತ್ರಿ ಮತ್ತೆ ಅದೇ ಸ್ಥಳದಲ್ಲಿ ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ, ಕೇಂದ್ರದ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಂಗಳೂರಿಗೆ ಹಿಂತಿರುಗುತ್ತಿದ್ದರು. ಕಾರು ಚೆಂಬುಗುಡ್ಡೆಯ ಪ್ರತಿಭಟನೆ ನಡೆಸುತ್ತಿದ್ದ ದಾರಿಯಾಗಿ ಬರುತ್ತಿದ್ದಂತೆ ಡಿವೈಎಫ್‌ಐ ಕಾರ್ಯಕರ್ತರು ಎದುರಾಗಿದ್ದಾರೆ. ಆಗ ಪ್ರತಿಭಟನಾಕಾರರು ಪೊಲೀಸ್ ಎಸ್ಕಾರ್ಟ್ ವಾಹನವನ್ನು ಗಮನಿಸಿ ಕ್ಷೇತ್ರದ ಶಾಸಕ, ಸ್ಪೀಕರ್ ಯು.ಟಿ.ಖಾದರ್ ಅವರ ಕಾರು ಎಂದು ತಪ್ಪಾಗಿ ಗ್ರಹಿಸಿ ಕೇಂದ್ರ ಸಚಿವರ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನ ಚದುರಿಸಿ ಸಚಿವರ ಕಾರು ತೆರಳಲು ಅನುವು ಮಾಡಿಕೊಟ್ಟಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ