ಉಡುಪಿ ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳಲ್ಲಿ ಆಕ್ಸಿಜನ್ ಚಾಲೆಂಜ್ ಅಭಿಯಾನ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಬಿವಿಪಿ ರಾಷ್ಟ್ರಾದ್ಯಂತ ಕೈಗೊಳ್ಳುತ್ತಿರುವ ಆಕ್ಸಿಜನ್ ಚಾಲೆಂಜ್ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಕೋವಿಡ್-19 ದೇಶಾದ್ಯಂತ ವ್ಯಾಪಕವಾದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್ ಕೊರತೆಯನ್ನು ಕಂಡಿರುತ್ತೇವೆ ಮತ್ತು ಅದರ ಮಹತ್ವವನ್ನು ಸ್ಪಷ್ಟವಾಗಿ ಮನಗಂಡಿರುತ್ತೇವೆ. ಆ ಒಂದು ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರು ತಮ್ಮ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಸಾಮಾಜಿಕ ಜಾಲತಾಣಗಳ ಮೂಲಕ ಆಕ್ಸಿಜನ್ ಚಾಲೆಂಜ್ ಅಭಿಯಾನವನ್ನು ಕೈಗೊಂಡಿದ್ದರು. ಒಬ್ಬ ವಿದ್ಯಾರ್ಥಿ ಗಿಡವನ್ನು ನೆಟ್ಟು ಮತ್ತೊಬ್ಬನಿಗೆ ಪ್ರೇರೇಪಿಸಿ ಕೈಗೊಂಡಂತಹ ವಿಶಿಷ್ಟ ಅಭಿಯಾನವನ್ನು ಇಂದಿಗೂ ಎಬಿವಿಪಿ ದೇಶಾದ್ಯಂತ ಮುಂದುವರೆಸಿಕೊಂಡು ಬಂದಿದೆ.

ಎಬಿವಿಪಿ ಉಡುಪಿ ವತಿಯಿಂದ ಬಲೈಪಾದೆ, ಮಂಚಿ, ಹಿರಿಯಡ್ಕ, ಹೆಬ್ರಿ, ಬನ್ನಂಜೆ ಸೇರಿದಂತೆ ಅನೇಕ ಹಾಸ್ಟೆಲ್‌ಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ವಿವಿಧ ಕಡೆಗಳಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಗಣೇಶ್ ಪೂಜಾರಿ, ತಾಲೂಕು ಸಂಚಾಲಕ ಅಜಿತ್ ಜೋಗಿ, ನಗರ ಕಾರ್ಯದರ್ಶಿ ಶ್ರೀವತ್ಸ, ಸಹ ಕಾರ್ಯದರ್ಶಿ ಕಾರ್ತಿಕ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸಂಹಿತಾ, ಮತ್ತು ಪ್ರಮುಖರಾದ ನವೀನ್, ಸ್ವಸ್ತಿಕ್, ಮನು, ಅನಂತಕೃಷ್ಣ, ಪ್ರಶ್ಮಾ, ರಕ್ಷಿತಾ ಸೇರಿದಂತೆ ಹಲವಾರು ಭಾಗವಹಿಸಿದರು.

Related posts

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ