ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ – 15 ವರ್ಷಗಳ ಬಳಿಕ ಅತುಲ್‌ ಆರೋಪಮುಕ್ತ

ಉಡುಪಿ : ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್‌ ರಾವ್‌ ಖುಲಾಸೆಗೊಂಡಿದ್ದಾರೆ.

ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಈ ಪ್ರಕರಣದಲ್ಲಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಅತುಲ್‌ ರಾವ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.

2008ರ ಜೂನ್ 10ರಂದು ಪದ್ಮಪ್ರಿಯ ಕರಂಬಳ್ಳಿಯ ಮನೆಯಿಂದ ನಾಪತ್ತೆಯಾಗಿದ್ದರು. ಈ ವಿಚಾರದಲ್ಲಿ ಭಟ್‌ ಬಾಲ್ಯ ಸ್ನೇಹಿತ, ಅತುಲ್‌ ರಾವ್‌ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ತನಿಖೆ ನಡೆಸಿದ ಸಿಓಡಿ ಅಧಿಕಾರಿಗಳು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯವು 2023ರ ನ.10ರಂದು ಆರೋಪಿ ಅತುಲ್‌ಗೆ ಒಂದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಇದರ ವಿರುದ್ಧ ಅತುಲ್‌ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್‌ ಹೆಗ್ಡೆ, ಆರೋಪಿ ಅತುಲ್‌‌ನನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದರು. ಆರೋಪಿ ಪರ ನ್ಯಾಯವಾದಿಗಳಾದ ಅರುಣ್‌ ಬಂಗೇರ ಹಾಗೂ ಸ್ಟೀವನ್‌ ಲೂಯಿಸ್‌ ವಾದ ಮಂಡಿಸಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ