ಪಡುಬಿದ್ರೆ ಬಾಲಕರಿಗೆ ಹಲ್ಲೆ; ಮೂರು ಪ್ರಕರಣ ದಾಖಲು…!

ಉಡುಪಿ : ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ರೈಲ್ವೆ ಟ್ರ್ಯಾಕ್ ಬಳಿಯ ಬಾಲಕರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ಮೂರು ಪ್ರಕರಣಗಳು ದಾಖಲಾಗಿರುತ್ತದೆ.

ಈ ಸೊತ್ತುಗಳು ರೈಲ್ವೆ ಇಲಾಖೆಗೆ ಸೇರಿದ್ದರಿಂದ ಈ ಬಗ್ಗೆ ಕೊಂಕಣ್ ರೈಲ್ವೆ ಕಾನೂನು ವಿಭಾಗದಿಂದ ನೀಡಿದ ವರದಿಯಂತೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲಾ‌ಗುವುದು. ಬಾಲಕರ ತಂದೆಯ ದೂರಿನ ಅನ್ವಯ ಮಕ್ಕಳಿಗೆ ಹೊಡೆದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ ಮತ್ತು ಬಾಲಕರಿಗೆ ದ್ವಿಚಕ್ರ ವಾಹನ ನೀಡಿದ ಬಗ್ಗೆಯೂ, ಅವರ ತಂದೆಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಈ ಪ್ರಕರಣವು ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ವಿರುದ್ಧ ಇರುವುದರಿಂದ, ಈ ಬಗ್ಗೆ ಮಾನ್ಯ ಸುಪ್ರೀಂ ಕೋರ್ಟ್ ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ. ತಪ್ಪಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ