ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ

ಪಡುಬಿದ್ರಿ : ಕರ್ನಾಟಕ ಸರಕಾರವು 2024ರ ಪ್ರತಿಷ್ಠಿತ ಮುಖ್ಯ‌ಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪಡುಬಿದ್ರಿ ಠಾಣೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪ್ರಸನ್ನ ಪಿ. ಎಸ್‌ರವರು ಆಯ್ಕೆ ಆಗಿದ್ದಾರೆ.

ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ, ಮಂಗಳೂರು ವಿವಿಧ ಕಡೆಗಳಲ್ಲಿ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ದಕ್ಷ ಅಧಿಕಾರಿಯಾಗಿ ಸೇವೆಗೈದು ಪ್ರಸ್ತುತ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಠಾಣಾಧಿಕಾರಿ ಅಗಿರುವ ಪ್ರಸನ್ನ ಪಿ.ಎಸ್ ರವರು ಕರ್ನಾಟಕ ಸರ್ಕಾರದ 2024ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಪುರಸ್ಕೃತರಾಗಿದ್ದಾರೆ.

ಎಪ್ರಿಲ್ 2(ಬುಧವಾರ) ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ