ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿನಲಿಕೆ ಸ್ಪರ್ಧೆ : ಯಶ್‌ಪಾಲ್ ಸುವರ್ಣ

ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಹೆಣ್ಣು ಮಕ್ಕಳಿಗೆ ಪೊಣ್ಣು ಪಿಲಿ‌ನಲಿಕೆ-2024 ಕಾರ್ಯಕ್ರಮ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಅಕ್ಟೋಬರ್ 5 ಶನಿವಾರ ಮಧ್ಯಾಹ್ನ 2 ಗಂಟೆಗೆ ಉಚ್ಚಿಲ ಮೊಗವೀರ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಲಿದೆ.

ಅಕ್ಟೋಬರ್ 6 ರವಿವಾರ ಮಧ್ಯಾಹ್ನ 2 ಗಂಟೆಗೆ ಶ್ರೀಮತಿ ಶಾಲಿನಿ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಪೊಣ್ಣು ಪಿಲಿ‌ನಲಿಕೆ ಸ್ಪರ್ಧೆ ನಡೆಯಲಿದೆ.

ಗುಂಪು ವಿಭಾಗದಲ್ಲಿ ಪ್ರಥಮ ಬಹುಮಾನ 25,000, ದ್ವಿತೀಯ ಬಹುಮಾನ 20,000, ತೃತೀಯ ಬಹುಮಾನ 15,000 ಹಾಗೂ ವೈಯುಕ್ತಿಕ ವಿಭಾಗದಲ್ಲಿ ಪ್ರಥಮ 6,000, ದ್ವಿತೀಯ 4,000, ತೃತೀಯ 3,000 ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಭಾಗವಹಿಸಿದ ಎಲ್ಲಾ ತಂಡಗಳಿಗೆ ರೂ. 5,000 ಪ್ರೋತ್ಸಾಹ ಧನ ನೀಡಲಾಗುವುದು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ‌ಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ