ವೈದ್ಯರ ಸಲಹೆ, ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಮಾಡುವಂತಿಲ್ಲ

ಉಡುಪಿ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ-ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡಬಾರದು. ಹಾಗೂ ಜಿಲ್ಲೆಯ ಎಲ್ಲಾ ರಕ್ತ ಕೋಶ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ರಕ್ತದಾನಿಗಳ ಪಟ್ಟಿಯನ್ನು ಸಿದ್ಧ ಪಡಿಸಿಟ್ಟು‌ಕೊಂಡು ಅವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !