ಪರಶುರಾಮನ ನಕಲಿ ಮೂರ್ತಿ ವಿವಾದ – ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ

ಕಾರ್ಕಳ : ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ‌ನನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್‌ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ತಿರಸ್ಕರಿಸಿ ಆದೇಶ ನೀಡಿತ್ತು. ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ ಹುಡುಕಾಟ ನಡೆಸಿದ್ದರು. ಕೇರಳದ ಕ್ಯಾಲಿಕಟ್‌ನಲ್ಲಿ ತಲೆಮರಸಿಕೊಂಡಿದ್ದ ಕೃಷ್ಣ ನಾಯ್ಕ್‌ನನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಲು ಯಶಸ್ವಿಯಾಗಿದ್ದಾರೆ.

ಕೃಷ್ಣ ನಾಯ್ಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಅವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ