ಪರಶುರಾಮನ ಕಂಚಿನ ಪ್ರತಿಮೆ ರಚನೆಯ ಅಕ್ರಮ ಪ್ರಕರಣ; ಆರೋಪಿ ಕೃಷ್ಣ ನಾಯ್ಕ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಆರೋಪಿ ಕೃಷ್ಣ ನಾಯ್ಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ತಮ್ಮ ವಿರುದ್ಧ ಉಡುಪಿ ಜಿಲ್ಲೆಯ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು ಹಾಗೂ ಎಫ್ಐಆರ್ ರದ್ದು ಕೋರಿ ಶಿಲ್ಪಿ ಕೃಷ್ಣ ನಾಯ್ಕ್ ಅರ್ಜಿಯನ್ನು ವಿಚಾರಣೆ ನಡೆಸಿದ ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.

ಮೇಲ್ನೋಟಕ್ಕೆ ಅಕ್ರಮ ಆಗಿರುವ ಬಗ್ಗೆ ಸಾಬೀತು ಆಗಿದೆ. ಪ್ರಕರಣ ಬಗ್ಗೆ ತನಿಖೆ ನಡೆಯಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ ಅರ್ಜಿದಾರರ ವಿರುದ್ಧ ಆಧಾರ ರಹಿತ ಆರೋಪ ಮಾಡಲಾಗಿದೆ. ಪ್ರಸ್ತುತ ಪರಶುರಾಮ ಥೀಮ್ ಪಾರ್ಕ್‌ನಲ್ಲಿರುವ ಮೂರ್ತಿಯನ್ನು ಬೇರೆಡೆ ಕೊಂಡೊಯ್ಯಲಾಗಿದೆ. ಅರ್ಜಿದಾರರ ಬೆಂಗಳೂರಿನ ನಿವಾಸಕ್ಕೆ ತೆರಳಿ ಕಾಂಗ್ರೆಸ್‌ನ ಮುಖಂಡರು ದಬ್ಬಾಳಿಕೆ ನಡೆಸಿದ್ದಾರೆ. ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಹಾಗಾಗಿ ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಆದರೆ ವಾದ ತಿರಸ್ಕರಿಸಿರುವ ಹೈಕೋರ್ಟ್ ಆರೋಪಿ ಕೃಷ್ಣ ನಾಯ್ಕ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ‌.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ