ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣನಾಯ್ಕಗೆ ನ್ಯಾಯಾಂಗ ಬಂಧನ

ಕಾರ್ಕಳ : ಕಾರ್ಕಳ ಪರಶುರಾಮ ಥೀಮ ಪಾರ್ಕ್ ನಕಲಿ ಮೂರ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ(45)ಗೆ ಕಾರ್ಕಳ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಆರೋಪಿ ಕೃಷ್ಣ ನಾಯ್ಕನನ್ನು ನವೆಂಬರ್ 10ರಂದು ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ನವೆಂಬರ್ 11ರಂದು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ನೇತೃತ್ವದಲ್ಲಿ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದೆ.

ವಿಚಾರಣೆ ಪೂರ್ಣಗೊಳಿಸಿರುವ ಪೊಲೀಸರು ಆರೋಪಿಯನ್ನು ಅವಧಿಗೆ ಮೊದಲೇ ಕಾರ್ಕಳ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ ನವೆಂಬರ್ 28ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ