ನಾಪತ್ತೆಯಾಗಿ ಪತ್ತೆಯಾದ ಮಗನನ್ನು ಕಳುಹಿಸಿ ಕೊಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ ಪೋಷಕರು

ಬಂಟ್ವಾಳದ ಫರಂಗಿಪೇಟೆ ನಿವಾಸಿ ದಿಗಂತ್ ಮನೆಗೆ ಹೋಗಲು ಒಪ್ಪುತ್ತಿಲ್ಲ ಎಂಬ ವಿಚಾರದ ಬಗ್ಗೆ ವರದಿಯಾಗಿದೆ. ಬಂಟ್ವಾಳ ಪೊಲೀಸರು ಹೈಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಬಗ್ಗೆ ಉಲ್ಲೇಖವಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ದಿಗಂತ್ ಪತ್ತೆ ಬಗ್ಗೆ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಅಫಿಡವಿಟ್ನಲ್ಲಿ ದಿಗಂತ್ ಪತ್ತೆಯಾದ ಬಗ್ಗೆ ಹಾಗೂ ದಿಗಂತ್ ಹೇಳಿಕೆಗಳನ್ನು ಪೊಲೀಸರು ಉಲ್ಲೇಖಿಸಿದ್ದಾರೆ.

ಇಂದು ಹೈ-ಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ, ಪೊಲೀಸರ ಪರ ವಕೀಲರು “ದಿಗಂತ್ ಪೋಷಕರ ಬಳಿ ಹೋಗಲು ನಿರಾಕರಿಸುತ್ತಿರುವ ಬಗ್ಗೆ ಹೈ ಕೋರ್ಟ್‌‌ಗೆ ತಿಳಿಸಿದರು.

ಇದೇ ವೇಳೆ ಮಗನನ್ನು ಕಳುಹಿಸಿ ಕೊಡುವಂತೆ ದಿಗಂತ್ ಫೋಷಕರು ಹೈಕೋರ್ಟ್‌ಗೆ ಮನವಿ ಮಾಡಿಕೊಂಡರು. ದಿಗಂತ್ ಪೋಷಕರ ಪರ ವಕೀಲರು “ದಿಗಂತ್ ಪತ್ತೆಯಾದ ದಿನ ತಾಯಿ ಜೊತೆ ಫೋನ್ನಲ್ಲಿ ಮಾತನಾಡಿದ ವಿವರ ನ್ಯಾಯಪೀಠಕ್ಕೆ ತಿಳಿಸಿದರು. ನಾನಾಗಿಯೇ ಹೋಗಿಲ್ಲ, ನನ್ನನ್ನು ಯಾರೋ ಕರೆದು ಕೊಂಡು ಹೋಗಿದ್ದಾರೆ ಎಂದು ದಿಗಂತ್ ಹೇಳಿದನ್ನು ಕೋರ್ಟ್ ಮುಂದೆ ಪ್ರಸ್ತಾಪಿಸಿದರು.

ಆದರೆ, ದಿಗಂತ್ ಅವನಾಗಿಯೇ ಹೋಗಿರುವುದಾಗಿ ಹೇಳಿದ್ದಾನೆ. ಅವನು ಯಾವುದೇ ಅನಧಿಕೃತ ಬಂಧನಕ್ಕೆ ಒಳಗಾಗಿರಲಿಲ್ಲ. ಪರೀಕ್ಷೆ ಭಯದಿಂದ ತಾನಾಗಿಯೇ ಹೋಗಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾಗಿ ಪೊಲೀಸರ ವರದಿಯಲ್ಲಿದೆ. ಪಿಯುಸಿ ಪರೀಕ್ಷೆ ಇನ್ನೂ ಮುಗಿಯದ ಕಾರಣ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೋಷಕರು ಇದೇ ವೇಳೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪರೀಕ್ಷೆ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳದಂತೆ ಹೈಕೋರ್ಟ್‌ ಸೂಚನೆ ನೀಡಿತು. ಅಲ್ಲದೇ, ಪರೀಕ್ಷೆ ವಿಚಾರದಲ್ಲಿ ವಿದ್ಯಾರ್ಥಿಗೆ ಯಾಕೆ ಒತ್ತಡ ಹೇರುತ್ತೀರಿ ಎಂದು ಪ್ರಶ್ನೆ ಮಾಡಿತು.

ದಿಗಂತ್ ಜೊತೆ ಮಾತನಾಡಲು ಅವಕಾಶ ಕೊಡುವಂತೆ ಹೈಕೋರ್ಟ್‌ಗೆ ಪೋಷಕರು ಮನವಿ ಮಾಡಿದರು. ದಿಗಂತ್ ವಿಚಾರದಲ್ಲಿ ಮಕ್ಕಳ ಕಲ್ಯಾಣ ಸಮಿತಿ ನಿರ್ಧಾರ ಕೈಗೊಳ್ಳಬೇಕೆಂದು ಹೈಕೋರ್ಟ್ ಸೂಚನೆ ನೀಡಿತು. ದಿಗಂತ್ ಸದ್ಯ ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿ ವಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar