ಉಡುಪಿ : ಸುನೀತಾ ವಿಲಿಯಮ್ಸ್ ಅವರು ಬರೋಬ್ಬರಿ 9 ತಿಂಗಳ ಬಾಹ್ಯಾಕಾಶ ವಾಸ ಮುಗಿಸಿ ಭೂಮಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಕೋಟಿ ಕೋಟಿ ಜನರ ಪ್ರಾರ್ಥನೆ ಹಾಗೂ ವಿಜ್ಞಾನಿಗಳ ಶ್ರಮದ ಫಲವಾಗಿ ಭೂಮಿಗೆ ವಾಪಸ್ಸಾಗುತ್ತಿದ್ದಾರೆ. ಭಾರತೀಯರು ಮಾತ್ರವಲ್ಲದೆ ಇಡೀ ವಿಶ್ವವೇ ಈ ಕ್ಷಣಕ್ಕಾಗಿ ಕಾದು ಕುಳಿತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿಯ ಪರ್ಯಾಯ ಪುತ್ತಿಗೆ ಶ್ರೀಗಳು “ನಮ್ಮ ಅಭಿಮಾನಿಯೂ ಆಗಿರುವ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶದಿಂದ ಭೂಮಿಗೆ ಬರುತ್ತಿದ್ದಾರೆ. ಇದು ಅತ್ಯಂತ ಖುಷಿ ಕೊಟ್ಟಿದೆ. ಅವರ ಈ ಯಾತ್ರೆ ನಿರ್ವಿಘ್ನವಾಗಿ ನಡೆಯಲಿ. ಅವರ ಸಾಧನೆ ಚಿರಸ್ಥಾಯಿಯಾಗಬೇಕು. ಅವರಿಗಾಗಿ ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ” ಎಂದು ಹೇಳಿದ್ದಾರೆ.