ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ

ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್, ಮಟಪಾಡಿ ಬ್ರಹ್ಮಾವರ ಇವರ ಸಂಯೋಜನೆಯಲ್ಲಿ ನಡೆದ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸಾಂಸ್ಕೃತಿಕ ಕಾರ್ಯಕ್ರಮವು ಚಪ್ಟೆಗಾರ್ ಸಭಾಭವನದಲ್ಲಿ ನಡೆಯಿತು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಐದು, ಪ್ರೌಢಶಾಲಾ ವಿಭಾಗದಲ್ಲಿ ಆರು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬ್ರಹ್ಮಾವರದ ನಿರ್ಮಲಾ ಪ್ರಾಥಮಿಕ ಶಾಲೆ (ಪ್ರಥಮ), ಬ್ರಹ್ಮಾವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ದ್ವಿತೀಯ) ಸ್ಥಾನ ಪಡೆಯಿತು. ಪ್ರೌಢ ಶಾಲಾ ವಿಭಾಗದಲ್ಲಿ ಬ್ರಹ್ಮಾವರದ ಶ್ರೀನಿಕೇತನ ಪ್ರೌಢಶಾಲೆ, ಮಟಪಾಡಿ (ಪ್ರಥಮ), ವಿ.ಕೆ.ಆರ್. ಆಚಾರ್ಯ ಪ್ರೌಢಶಾಲೆ ಕುಂಜಾಲು(ದ್ವಿತೀಯ) ಸ್ಥಾನ ಪಡೆಯಿತು.

ಸಮಾರೋಪ ಸಮಾರಂಭದಲ್ಲಿ ಬಿಎಸ್ಎನ್‌ಎಲ್‌ನ ನಿವೃತ್ತ ಮಹಾ ಪ್ರಬಂಧಕ ಚಂದ್ರಶೇಖರ ಕಲ್ಕೂರ ಅವರಿಗೆ ಗೌರವ ಸನ್ಮಾನ ನಡೆಸಲಾಯಿತು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ