ಸಾರ್ವಜನಿಕ ದೂರಿಗೆ ಸ್ಪಂದಿಸದ ಪೆರ್ಡೂರು ಗ್ರಾಪಂ ಪಿಡಿಓ : ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಉಡುಪಿ ಜನಸ್ಪಂದನಾ ಸಭೆಯು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಬನ್ನಂಜೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಪೆರ್ಡೂರು ಗ್ರಾಪಂ ಪಿಡಿಓ ಸುಮನ‌ ಅವರನ್ನು ಕಾಪು ಶಾಸಕ‌‌ ಗುರ್ಮೆ ಸುರೇಶ್ ಶೆಟ್ಟಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಪೆರ್ಡೂರಿನಲ್ಲಿ ಸಾರ್ವಜನಿಕ ರಸ್ತೆಗೆ ಖಾಸಗಿ‌ ವ್ಯಕ್ತಿ ಬೇಲಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸ್ಥಳೀಯ ವ್ಯಕ್ತಿ ನೀಡಿದ‌ ದೂರಿಗೆ ಪಿಡಿಓ ಸುಮನ ಅವರು ಸರಿಯಾಗಿ ಸ್ಪಂದಿಸಿರಲಿಲ್ಲ. ಈ ಕಾರಣಕ್ಕಾಗಿ ಪಿಡಿಓ ಅವರನ್ನು ಶಾಸಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಾರ್ವಜನಿಕರ ದೂರಿಗೆ ಸರಿಯಾಗಿ ಸ್ಪಂದಿಸದಿರುವುದಕ್ಕೆ ಹಾಗೂ ಹಲವು ಬಾರಿ ಈ ರೀತಿ ನಿರ್ಲಕ್ಷ್ಯ ವಹಿಸಿರುವುದಕ್ಕಾಗಿ ಜಿಲ್ಲಾಧಿಕಾರಿಗಳ ಎದುರಲ್ಲೇ ಪಿಡಿಓ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ