ಬ್ಲೂ ಪ್ಲಾಗ್ ಬೀಚ್ ನಲ್ಲಿ ಯುವತಿಯ ಫೊಟೋ ಶೂಟ್ – ಯುವತಿಯಿಂದ ದೂರು ಬಂದಿಲ್ಲ, ಪೊಲೀಸ್ ಸ್ಪಷ್ಟನೆ

ಪಡುಬಿದ್ರಿ : ಯುವತಿ ಮತ್ತು ಯುವಕ ಪಡುಬಿದ್ರೆ ಬ್ಲೂ ಫ್ಲಾಗ್ ಬೀಚಿನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂದು ಪೊಲೀಸರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ. ಅದರಂತೆ ಬೀಟ್ ಕರ್ತವ್ಯದಲ್ಲಿದ್ದ ಎ‌ಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಲ್ಲಿರುವ ಯುವಕ ಮತ್ತು ಯುವತಿಯನ್ನು ಕರೆದು ಬುದ್ಧಿಮಾತು ಹೇಳಿದ್ದಾರೆ. ಇದು ಬ್ಲೂ ಫ್ಲಾಗ್ ಬೀಚ್, ವಸತಿ ಪ್ರದೇಶ. ಇಲ್ಲಿ ಅಸಭ್ಯವಾಗಿ ವರ್ತಿಸಬಾರದು ಎಂದು ಹೇಳಿದ ಬಳಿಕ ಅವರು ಅಲ್ಲಿಂದ ತೆರಳಿದ್ದಾರೆ. ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿರುವುದಿಲ್ಲ. ಈ ಬಗ್ಗೆ ಯುವತಿಯನ್ನು ಸಂಪರ್ಕಿಸಿ ಅವರಿಗೆ ಯಾವುದೇ ದೂರುಗಳಿದ್ದಲ್ಲಿ ಮುಕ್ತವಾಗಿ ನೀಡಬಹುದಾಗಿ ತಿಳಿಸಲಾಗಿದೆ. ಈ ಬಗ್ಗೆ ದೂರು ಬಂದಲ್ಲಿ ಕಾನೂನಿನಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ