ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಪಿಕಪ್ : ಅಪಾಯದಿಂದ ಪಾರಾದ ಚಾಲಕ

ಕುಂದಾಪುರ : ಹಣ್ಣು ತುಂಬಿದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸೋಮವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸರ್ಕಲ್‌ನ ಮಧ್ಯ ರಸ್ತೆಯಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ಹಣ್ಣು ತುಂಬಿ ಉಡುಪಿ ಕಡೆಗೆ ಬರುತ್ತಿರುವ ಪಿಕಪ್ ವಾಹನವನ್ನು ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮಾರ್ಗಮಧ್ಯೆ ಜಾಹೀರಾತಿನ ಬ್ಯಾರೀಕೆಡ್ ಕಂಡು ಹಠಾನೆ ಬ್ರೇಕ್ ಹಾಕಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾನೆ.

ರಸ್ತೆಯ ಮಧ್ಯದಲ್ಲಿ ರಾತ್ರಿಯ ವೇಳೆ ಬ್ಯಾರೀಕೆಡ್ ಇರುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ರಾತ್ರಿಯ ವೇಳೆ ಬ್ಯಾರೀಕೆಡ್ ರಸ್ತೆಯಿಂದ ತೆರವು ಮಾಡಬೇಕು ಎಂದು ಚಾಲಕರು ಸಂಬಂಧಪಟ್ಟವರಿಗೆ ಮನವಿ ಮಾಡಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ