ಪ್ರಧಾನಿ ಮೋದಿ ಜನ್ಮದಿನ – ಸಂಸದ ಬ್ರಿಜೇಶ್ ಚೌಟ ರಕ್ತದಾನ

ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ರಕ್ತದಾನ ಮಾಡುವ ಮೂಲಕ ಆಚರಿಸಿಕೊಂಡಿದೆ.

ಪಿವಿಎಸ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು ದಕ್ಷಿಣ ಕನ್ನಡ‌ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರಕ್ತದಾನ ಮಾಡಿದ ಬಳಿಕ ಮಾತನಾಡಿದ ಸಂಸದರು, ಪ್ರಧಾನಿ ನರೇಂದ್ರ ಮೋದಿ ಜೀ ಅವರು ಯುವ ನಾಯಕತ್ವದ ಮೇಲೆ ವಿಶ್ವಾಸವಿರಿಸಿಕೊಂಡವರು. ಇಂದು ಯುವಮೋರ್ಚಾ ಕಾರ್ಯಕರ್ತರ ಈ ಸಮಾಜಮುಖಿ ಕಾರ್ಯಕ್ರಮವು ನಿಜಕ್ಕೂ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸುವ ಕಾರ್ಯವಾಗಿದೆ ಎಂದು ಶುಭ ಹಾರೈಸಿದರು.

ಬಳಿಕ ಮಾತನಾಡಿದ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಗೆ 74 ಯೂನಿಟ್ ರಕ್ತ ಸಂಹ್ರಹಿಸಿ ನೀಡಲಾಗಿದೆ. ಶ್ರೀ ನರೇಂದ್ರ ಮೋದಿ ಅವರು ತಮ್ಮ ಜೀವನವನ್ನು ರಾಷ್ಟ್ರದ ಉನ್ನತಿಗಾಗಿ ಮುಡಿಪಾಗಿಟ್ಟಿದ್ದಾರೆ. ದೇಶದ ತೀರಾ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಿರಂತರವಾಗಿ ವಿಶೇಷವಾಗಿ ಕೊಡುಗೆ ನೀಡುವ ಮೂಲಕ ಮಾದರಿ ಆಡಳಿತ ನೀಡುತಿದ್ದಾರೆ. ಆ ನಿಟ್ಟಿನಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ಅವರ ಜನ್ಮ ದಿನವನ್ನು ಸಾಮಾಜಿಕ ಸೇವೆಯ ಮೂಲಕ ಆಚರಿಸಲು ರ್ಕದಾನ ಹಮ್ಮಿಕೊಂಡಿದ್ದೇವೆ. ಜನರಿಗೆ ಅವಶ್ಯಕವಾದ ರಕ್ತದಾನದ ಮಹತ್ವವನ್ನು ತಿಳಿಸಿಕೊಡಲು ಇದು ಉತ್ತಮ ಮಾರ್ಗವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಮುರಳಿ ಕೊಣಾಜೆ, ನಿತೇಶ್ ಕಲ್ಲೇಗ, ಶಿಶಿರ್ ಪೆರುವಾಡಿ, ಅಶ್ವಿತ್ ಕೊಟ್ಟಾರಿ, ಕುಮಾರ್ ಪ್ರಸಾದ್, ಉಮೇಶ್ ಕುಲಾಲ್, ನಿಶಾನ್ ಪೂಜಾರಿ, ವರುಣ್ ಅಂಬಟ, ಅವಿನಾಶ್ ಸುವರ್ಣ, ನವೀನ್ ರಾಜ್, ಸಾಕ್ಷಾತ್ ಶೆಟ್ಟಿ, ಬಿಜೆಪಿ ಜಿಲ್ಲಾ ನಾಯಕರು, ಮಂಡಲ‌ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ