ಬಾತ್‌ರೂಮ್ ಗೀಸರ್‌ನಿಂದ ವಿಷಾನಿಲ ಸೋರಿಕೆ : ಯುವಕ ಬಲಿ

ಮೂಡುಬಿದಿರೆ : ಸ್ನಾನಕ್ಕೆಂದು ಬಾತ್‌ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.

ಮೃತಪಟ್ಟ ಯುವಕ ಕೋಟೆಬಾಗಿಲಿನ ಫ್ಲ್ಯಾಟ್‌ನಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಎಂದು ಗುರುತಿಸಲಾಗಿದೆ.

ಶಾರಿಕ್‌ರವರು ರವಿವಾರ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್‌ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್‌ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್‌ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆ ಆಗಿದೆ. ಇದನ್ನು ಆಕಸ್ಮಿಕವಾಗಿ ಸೇವಿಸಿದ್ದರಿಂದ ಶಾರಿಕ್ ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಶಾರಿಕ್ ದ್ವಿತೀಯ ಪಿಯುಸಿ ಮುಗಿಸಿದ್ದು, ಮೂಡುಬಿದಿರೆಯ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆದಿದ್ದರು.

Related posts

19 ಗೋವು ಅಕ್ರಮ ಸಾಗಾಟ ಪ್ರಕರಣ : ಐವರು ಪೊಲೀಸ್ ವಶಕ್ಕೆ

ನಿಂತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ

ಬೆಳಾಲು ರಸ್ತೆ ಬದಿಯಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ; ಮಗುವಿನ ಹೆತ್ತವರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು