ಬೀಚ್ ಸಮೀಪ ನಿಷೇಧಿತ ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿ ಪೊಲೀಸ್ ವಶಕ್ಕೆ

ಉಡುಪಿ : ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಬೈಂದೂರು ತಾಲೂಕು ಮರವಂತೆ ಬೀಚ್‌ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಅನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭ ಅಬ್ರಾರ್‌ ಶೇಖ್‌, ಮೊಹಮ್ಮದ್‌ ಇಸ್ಮಾಯಿಲ್‌ ಫ‌ರ್ಹಾನ್‌, ಮೊಹಮ್ಮದ್‌ ಜಿಯಾಮ್‌ ಬೆಳ್ಳಿ, ನೌಮನ್‌ ಸಜ್ಜಾದ್‌ ಮುಸ್ತಕೀಮ್‌ ಎಂಬವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾಳಿಯಲ್ಲಿ 15.59 ಮಿಲಿ ಗ್ರಾಂ ತೂಕದ 78 ಸಾವಿರ ರೂ. ಮೊತ್ತದ ಎಂಡಿಎಂಎ ಪೌಡರ್‌, ಆರೋಪಿಗಳು ಬಳಸಿದ್ದ 5 ಮೊಬೈಲ್‌, ಮಾದಕ ವಸ್ತು ಮಾರಾಟಕ್ಕೆ ಬಳಸಿದ ಕಾರು ಸಹಿತ 11,28,000 ರೂ. ಮೊತ್ತದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಪೌಡರ್‌ ಅನ್ನು ಬೆಂಗಳೂರಿನ ದಾವೂದ್‌ ಮತ್ತು ಇಸಾಕ್‌ ಅವರಿಂದ ಖರೀದಿಸಿರುವ ಬಗ್ಗೆ ತನಿಖೆ ವೇಳೆ ಪೊಲೀಸರಲ್ಲಿ ಹೇಳಿದ್ದಾರೆ. ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ