ಗರುಡ ಗ್ಯಾಂಗ್ ಸದಸ್ಯ ಇಸಾಕ್‌ನ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

ಉಡುಪಿ : ಹಿರಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗುಂಡೇಟು ಪ್ರಕರಣದ ಆರೋಪಿ, ಗರುಡ ಗ್ಯಾಂಗ್ ಸದಸ್ಯ ಇಸಾಕ್‌ನ ಪೊಲೀಸ್ ಕಸ್ಟಡಿ ಅವಧಿಯನ್ನು ಉಡುಪಿ ನ್ಯಾಯಾಲಯವು ಎಪ್ರಿಲ್ 4ರವರೆಗೆ ವಿಸ್ತರಿಸಿ ಆದೇಶ ನೀಡಿದೆ.

ಉಡುಪಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡ ಇಸಾಕ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಸ್ಟಡಿಗೆ ಪಡೆದಿದ್ದರು. ಅವಧಿ ಮುಗಿದ ಹಿನ್ನೆಲೆಯಲ್ಲಿ ಇದೀಗ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ತನಿಖೆ ಬಾಕಿ ಇರುವ ಕಾರಣ ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದರಂತೆ ನ್ಯಾಯಾಲಯ ಆತನ ಪೊಲೀಸ್ ಕಸ್ಟಡಿ ಅವಧಿಯನ್ನು ಎಪ್ರಿಲ್ 4ರವರೆಗೆ ವಿಸ್ತರಿಸಿದೆ ಎಂದು ಮೂಲಗಳು ತಿಳಿಸಿವೆ.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ