10 ವರ್ಷ ವಿದ್ವಂಸಕ ಪತ್ತೆಯಲ್ಲಿ ಪಳಗಿದ್ದ ಪೊಲೀಸ್‌ ಶ್ವಾನ “ಐಕಾನ್” ನಿವೃತ್ತಿ

ಉಡುಪಿ : ಕಳೆದ 10 ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ ‘ಐಕಾನ್‌’ ನಿವೃತ್ತಿ ಹೊಂದಿದೆ. ಇಂದು ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸರು ಶ್ವಾನಕ್ಕೆ ಗೌರವ ಸಲ್ಲಿಸಿದರು.

ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು ಸ್ಪೋಟಕ ಪತ್ತೆ ಬಗ್ಗೆ 9 ತಿಂಗಳು ಕಠಿಣ ತರಬೇತಿ ಪಡೆದಿತ್ತು. ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417‌ಕ್ಕಿಂತ ಅಧಿಕ ಪತ್ತೆ ಕಾರ್ಯ ನಿರ್ವಹಿಸಿದೆ. ಈ ಶ್ವಾನವು ರಾಷ್ಟ್ರಪತಿಗಳು, ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ವಿದೇಶಿ ಗಣ್ಯರು ಹಾಗೂ ಗಣ್ಯಾತಿಗಣ್ಯರ ಆಗಮನದ ಸಂಧರ್ಭದಲ್ಲಿ ಹಾಗೂ ಏರ್‌ ಶೋ, ಜಿ-20 ಶೃಂಗಸಭೆ, ದತ್ತ ಜಯಂತಿ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಪಂದ್ಯಾವಳಿ, ಸಾಗರ ಕವಚ ಹಾಗೂ ಪ್ರತಿನಿತ್ಯದ ಕರ್ತವ್ಯದಲ್ಲಿ ಮಲ್ಪೆ ಬಂದರು, ಕಾಪು ಲೈಟ್‌ಹೌಸ್‌, ಮಣಿಪಾಲ ಯೂನಿವರ್ಸಿಟಿ, ರೈಲ್ವೇ ನಿಲ್ದಾಣ, ನಾಗಾರ್ಜುನ, ಮೈಸೂರು ದಸರಾ, ನ್ಯಾಷನಲ್‌ ನಾರ್ಕೋಟಿಕ್ಸ್‌ ಕಾನ್ಫರೆನ್ಸ್‌, ಬ್ರಹ್ಮಾವರದಲ್ಲಿ ಕಚ್ಚಾ ಬಾಂಬ್‌ ಪತ್ತೆ ಇತ್ಯಾದಿ ಸಂಧರ್ಭಗಳಲ್ಲಿ ಸ್ಪೋಟಕ ಪತ್ತೆ ಕಾರ್ಯದಲ್ಲಿ ಭಾಗವಹಿಸಿತ್ತು. ಮಾತ್ರವಲ್ಲ, ಯಾವುದೇ ವಿಧ್ವಂಸಕ ಕೃತ್ಯ ನಡೆಯದಂತೆ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿತ್ತು.

ಇಂದು ನಡೆದ ಕಾರ್ಯಕ್ರಮದಲ್ಲಿ ಪೊಲೀಸ್‌ ಅಧೀಕ್ಷಕರಾದ ಡಾ|| ಅರುಣ್‌ ಕೆ. ಐ.ಪಿ.ಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಪರಮೇಶ್ವರ ಹೆಗಡೆ ಸಹಿತ ಪೊಲೀಸ್ ಅಧಿಕಾರಿಗಳು ಗೌರವ ಸಲ್ಲಿಸಿದರು.

Related posts

ರಸ್ತೆ ದಾಟುತ್ತಿದ್ದ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ; ಬಾಲಕ ಸಾವು

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ಆರೋಪ; ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ಬೈಂದೂರು ಮನೆಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ