ಪೊಲೀಸ್ ಇನ್ಸ್ಪೆಕ್ಟರ್ ನಂಜಪ್ಪ ನಿಧನ

ಕುಂದಾಪುರ : ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಂಜಪ್ಪ ಅವರು ಇಂದು ಮುಂಜಾನೆ 1.15 ರ ಸುಮಾರಿಗೆ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತು.

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೂರು ದಿನಗಳ ಹಿಂದೆ ಉಡುಪಿಯ ಆದರ್ಶ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು ಕಳೆದ ಒಂದು ವರ್ಷದಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಇನ್ಸ್ಪೆಕ್ಟರ್ ಸಾವಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.

ಇಂದು ಬೆಳಿಗ್ಗೆ 10.15ಕ್ಕೆ ಕುಂದಾಪುರ ನಗರ ಪೊಲೀಸ್‌ ಠಾಣೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ